ನ್ಯಾಯಸ್ಥಾಪಕರು 9:57 - ಪರಿಶುದ್ದ ಬೈಬಲ್57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು. ಅಧ್ಯಾಯವನ್ನು ನೋಡಿ |
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.