Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:6 - ಪರಿಶುದ್ದ ಬೈಬಲ್‌

6 ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:6
8 ತಿಳಿವುಗಳ ಹೋಲಿಕೆ  

ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.


ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು