ನ್ಯಾಯಸ್ಥಾಪಕರು 9:7 - ಪರಿಶುದ್ದ ಬೈಬಲ್7 ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿ |
ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.