ಪರಮಗೀತೆ 1:15 - ಪರಿಶುದ್ದ ಬೈಬಲ್15 ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ. ಅಧ್ಯಾಯವನ್ನು ನೋಡಿ |
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.