ಪರಮಗೀತೆ 1:4 - ಪರಿಶುದ್ದ ಬೈಬಲ್4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ! ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”