ಪರಮಗೀತೆ 1:5 - ಪರಿಶುದ್ದ ಬೈಬಲ್5 ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆರೂಸಲೇವಿುನ ನಾರಿಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಚಂದವುಳ್ಳವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆರೂಸಲೇಮಿನ ಪುತ್ರಿಯರೇ, ನಾನು ಕಪ್ಪಾದವಳು ಆದರೂ ಸುಂದರಿ. ಕೇದಾರಿನ ಗುಡಾರಗಳಂತೆಯೂ, ಸೊಲೊಮೋನನ ಡೇರೆಯ ತೆರೆಗಳಂತೆಯೂ ಚೆಲುವೆ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.