ಪರಮಗೀತೆ 1:6 - ಪರಿಶುದ್ದ ಬೈಬಲ್6 ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿರುವದರಿಂದ ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಉರಿಗೊಂಡು ತೋಟಗಳನ್ನು ಕಾಯುವದಕ್ಕೆ ಹಾಕಿದರು; ನನ್ನ ತೋಟವನ್ನೋ ನಾನು ಕಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು. ಅಧ್ಯಾಯವನ್ನು ನೋಡಿ |