Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:8 - ಪರಿಶುದ್ದ ಬೈಬಲ್‌

8 ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ, ನೀನು ಮಂದೆಯ ಜಾಡಿನಲ್ಲಿಯೇ ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:8
25 ತಿಳಿವುಗಳ ಹೋಲಿಕೆ  

ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.


ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?


ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.


ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು.


ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ನಾನು ಕ್ರಿಸ್ತನ ಮಾದರಿಯನ್ನು ಅನುಸರಿಸುವಂತೆ ನೀವೂ ನನ್ನ ಮಾದರಿಯನ್ನು ಅನುಸರಿಸಿರಿ.


ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!


ನನ್ನ ಪ್ರಿಯೆ, ನೀನು ಸರ್ವಾಂಗಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!


ನನ್ನ ಪ್ರಿಯಳೇ, ನೀನು ಬಹಳ ಸುಂದರಿ! ನೀನು ರೂಪವತಿ! ಮುಸುಕಿನೊಳಗಿರುವ ನಿನ್ನ ಕಣ್ಣುಗಳು ಕೋಮಲವಾದ ಪಾರಿವಾಳಗಳಂತಿವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.


ನನ್ನ ಪ್ರಿಯನು ನನಗೆ ಹೀಗೆಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!


ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.


ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.


ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು