ಪರಮಗೀತೆ 2:13 - ಪರಿಶುದ್ದ ಬೈಬಲ್13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.” ಅಧ್ಯಾಯವನ್ನು ನೋಡಿ |