ಪರಮಗೀತೆ 2:3 - ಪರಿಶುದ್ದ ಬೈಬಲ್3 ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.