ಪರಮಗೀತೆ 3:1 - ಪರಿಶುದ್ದ ಬೈಬಲ್1 ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಲ್ಲೆ : ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರಾತ್ರಿ ರಾತ್ರಿಯಲ್ಲಿಯೂ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲಿಲ್ಲ. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.