10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.
10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;