Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:8 - ಪರಿಶುದ್ದ ಬೈಬಲ್‌

8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿವಿುತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:8
13 ತಿಳಿವುಗಳ ಹೋಲಿಕೆ  

ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.


ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!


ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ.


ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.


ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.


ಆ ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು.


ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು