Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:10 - ಪರಿಶುದ್ದ ಬೈಬಲ್‌

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:10
10 ತಿಳಿವುಗಳ ಹೋಲಿಕೆ  

ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ. ನಿನ್ನ ರೂಪ ಮನೋಹರ; ನಿನ್ನ ಪ್ರೇಮವು ಆನಂದ ಪೂರ್ಣವಾಗಿದೆ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.


ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.


ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು