ಪರಮಗೀತೆ 4:12 - ಪರಿಶುದ್ದ ಬೈಬಲ್12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ. ಅಧ್ಯಾಯವನ್ನು ನೋಡಿ |
ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.