Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:5 - ಪರಿಶುದ್ದ ಬೈಬಲ್‌

5 ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುವ ಎರಳೆಯ ಅವಳಿಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:5
12 ತಿಳಿವುಗಳ ಹೋಲಿಕೆ  

ನಿನ್ನ ಸ್ತನಗಳು ಪ್ರಾಯದ ಸಾರಂಗದ ಎರಡು ಅವಳಿ ಮರಿಗಳಂತಿವೆ.


ನನ್ನ ಪ್ರಿಯನು ನನ್ನವನೇ; ನಾನು ಅವನವಳೇ. ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.


ನನ್ನ ಪ್ರಿಯನು ನನ್ನವನೇ! ನಾನು ಅವನವಳೇ! ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.


ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.


ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!


ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ. ನಿನ್ನ ಸ್ತನಗಳು ಖರ್ಜೂರ ಮರದ ಹಣ್ಣಿನ ಗೊಂಚಲುಗಳಂತಿವೆ.


ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬತ್‌ರಬ್ಬೀಮ್‌ನ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು