Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:9 - ಪರಿಶುದ್ದ ಬೈಬಲ್‌

9 ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:9
31 ತಿಳಿವುಗಳ ಹೋಲಿಕೆ  

ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ನಾನು ನನ್ನ ಪ್ರಿಯನವಳೇ. ಅವನಿಗೆ ನನ್ನ ಮೇಲೇ ಆಸೆ.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು.


ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಉದ್ರೇಕಗೊಳಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಇಳಿಜಾರುಗಳಲ್ಲಿ ನೃತ್ಯವಾಡುತ್ತಿರುವ ಆಡುಮಂದೆಯಂತೆ ಬಳಕುತ್ತಿದೆ.


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!


ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.


ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿದೆ.


ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.


ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.


ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು