ಪರಮಗೀತೆ 5:1 - ಪರಿಶುದ್ದ ಬೈಬಲ್1 ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.