Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:14 - ಪರಿಶುದ್ದ ಬೈಬಲ್‌

14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:14
15 ತಿಳಿವುಗಳ ಹೋಲಿಕೆ  

ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ ಗುಂಡು ಬಟ್ಟಲಿನಂತಿದೆ. ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಧಿಯ ರಾಶಿಯಂತಿದೆ.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.


ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ, ಪಚ್ಚೆಗಳಿರಬೇಕು.


ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.


ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ಝಗಝಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು