ಪರಮಗೀತೆ 5:16 - ಪರಿಶುದ್ದ ಬೈಬಲ್16 ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನ ನುಡಿ ಬಹು ಇಂಪು; ಹೌದು, ಅವನು ಸರ್ವಾಂಗದಲ್ಲಿಯೂ ಮನೋಹರನು; ಯೆರೂಸಲೇವಿುನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು. ಅಧ್ಯಾಯವನ್ನು ನೋಡಿ |