ಪರಮಗೀತೆ 5:2 - ಪರಿಶುದ್ದ ಬೈಬಲ್2 ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.” ಅಧ್ಯಾಯವನ್ನು ನೋಡಿ |