Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:6 - ಪರಿಶುದ್ದ ಬೈಬಲ್‌

6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:6
30 ತಿಳಿವುಗಳ ಹೋಲಿಕೆ  

ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.


ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?


ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗಲಿಲ್ಲ.


ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.


ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.


ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.


ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು