Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:10 - ಪರಿಶುದ್ದ ಬೈಬಲ್‌

10 ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:10
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯಳೇ, ನೀನು ತಿರ್ಚ ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು.


ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.


ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.


ನಿನ್ನ ಜೀವಿತವು ಮಧ್ಯಾಹ್ನದ ಸೂರ್ಯನಿಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವುದು. ನಿನ್ನ ಜೀವಿತದ ಕಾರ್ಗತ್ತಲೆಯ ತಾಸುಗಳು ಮುಂಜಾನೆಯ ಸೂರ್ಯನಂತೆ ಹೊಳೆಯುತ್ತವೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು