ಪರಮಗೀತೆ 7:12 - ಪರಿಶುದ್ದ ಬೈಬಲ್12 ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷೆಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬರಗಳು ಪುಷ್ಟಿಸಿವೆಯೋ ನೋಡೋಣ! ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು. ಅಧ್ಯಾಯವನ್ನು ನೋಡಿ |