Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:7 - ಪರಿಶುದ್ದ ಬೈಬಲ್‌

7 ನೀನು ಖರ್ಜೂರದ ಮರದಂತೆ ಎತ್ತರವಾಗಿರುವೆ. ನಿನ್ನ ಸ್ತನಗಳು ಖರ್ಜೂರ ಮರದ ಹಣ್ಣಿನ ಗೊಂಚಲುಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀಳವಾದ ನಿನ್ನ ಆಕಾರವು ಖರ್ಜೂರದ ಮರವು ನಿನ್ನ ಸ್ತನಗಳು ಅದರ ಗೊಂಚಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:7
12 ತಿಳಿವುಗಳ ಹೋಲಿಕೆ  

ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.


ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?


ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.


ನಿನ್ನ ಸ್ತನಗಳು ಪ್ರಾಯದ ಸಾರಂಗದ ಎರಡು ಅವಳಿ ಮರಿಗಳಂತಿವೆ.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ. ನಿನ್ನ ರೂಪ ಮನೋಹರ; ನಿನ್ನ ಪ್ರೇಮವು ಆನಂದ ಪೂರ್ಣವಾಗಿದೆ.


ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು