ಪರಮಗೀತೆ 8:1 - ಪರಿಶುದ್ದ ಬೈಬಲ್1 ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀನು ನನ್ನ ತಾಯಿಯ ಹಾಲು ಕುಡಿದ ನನ್ನ ಅಣ್ಣನಾಗಿದ್ದರೆ, ಎಷ್ಟೋ ಚೆನ್ನಾಗಿರುತ್ತಿತ್ತು! ನಾನು ನಿನ್ನನ್ನು ಕಂಡು ಹೊರಗೆಯೇ ನಿನಗೆ ಮುದ್ದಿಡುತ್ತಿದ್ದೆ. ಆಗ ಯಾರೂ ನನ್ನನ್ನು ನಿಂದಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.