ಪರಮಗೀತೆ 8:5 - ಪರಿಶುದ್ದ ಬೈಬಲ್5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಆ ಸೇಬುಮರದ ಕೆಳಗೆ ನಿನ್ನನ್ನು ಎಬ್ಬಿಸಿದೆನಲ್ಲಾ! ಇಗೋ, ಅಲ್ಲಿ ನಿನ್ನ ತಾಯಿಯು ನಿನ್ನನ್ನು ಹೆತ್ತಳು, ಅಲ್ಲೇ ಪ್ರಸವವೇದನೆ ಪಟ್ಟು, ನಿನ್ನನ್ನು ಪಡೆದಳು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.