Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:7 - ಪರಿಶುದ್ದ ಬೈಬಲ್‌

7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜಲದ ರಾಶಿಗಳೂ ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳಿಗೂ ಅದನ್ನು ಮುಣುಗಿಸಲು ಶಕ್ತಿಯಿಲ್ಲ. ಒಬ್ಬನು ತನ್ನ ಮನೆಮಾರನ್ನೆಲ್ಲಾ ಕೊಟ್ಟು ಪ್ರೀತಿಯನ್ನು ಪಡೆಯಲು ಯತ್ನಿಸಿದರೆ ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:7
8 ತಿಳಿವುಗಳ ಹೋಲಿಕೆ  

ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ಯೋಸೇಫನ ಧಣಿಯು ತನ್ನ ಹೆಂಡತಿಯ ಮಾತು ಕೇಳಿ ತುಂಬ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು