Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:9 - ಪರಿಶುದ್ದ ಬೈಬಲ್‌

9 ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಿಗೆಗಳಿಂದ ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳು ಗೋಡೆಯಾದರೆ, ನಾವು ಅವಳ ಮೇಲೆ ಬೆಳ್ಳಿಯ ಗೋಪುರವನ್ನು ಕಟ್ಟುವೆವು. ಅವಳು ಬಾಗಿಲಾದರೆ, ದೇವದಾರು ಹಲಿಗೆಗಳಿಂದ ಅವಳನ್ನು ಭದ್ರಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:9
14 ತಿಳಿವುಗಳ ಹೋಲಿಕೆ  

‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


“ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.


ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.


“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.


ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು