ಪ್ರಕಟನೆ 1:13 - ಪರಿಶುದ್ದ ಬೈಬಲ್13 ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪರತಲ್ಲ್ಯಾ ತನ್ನಾ ಸಾತ್ ದಿವೆ ಥವ್ತಲೆ ಖಾಂಬೆ ಅನಿ ತೆಂಚ್ಯಾ ಮದ್ದಿ ಮಾನ್ಸಾಚ್ಯಾ ಸರ್ಕೊ ಎಕ್ಲೊ ಹೊತ್ತೊ. ತೆನಿ ಅಪ್ನಾಚ್ಯಾ ಪಾಂಯಾಕ್ನಿ ಜಾವ್ನ್ ಲಾಗಿ ಸರ್ಕೊ ಲಾಂಬ್ಲೊ ಝಗೊ ನೆಸಲ್ಲ್ಯಾನ್, ಅನಿ ತೆಚ್ಯಾ ಹಿರ್‍ದ್ಯಾರ್ ಎಕ್ ಸೊನ್ಯಾಚೊ ಪಟ್ಟೊ ಹೊತ್ತೊ. ಅಧ್ಯಾಯವನ್ನು ನೋಡಿ |