Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:16 - ಪರಿಶುದ್ದ ಬೈಬಲ್‌

16 ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಅಪ್ನಾಚ್ಯಾ ಉಜ್ವ್ಯಾ ಹಾತಿತ್ ಸಾತ್ ಚಿಕ್ಕಿಯಾ ಧರಲ್ಲ್ಯಾನ್ ಅನಿ ತ್ಯೆಚ್ಯಾ ತೊಂಡಾತ್ನಾ ಎಕ್ ದೊನ್ ಬಾಜುನ್ ದಾರ್ ಹೊತ್ತೊ ಕೊಯ್ತೊ ಭಾಯ್ರ್ ಯೆಲೊ, ತೆಚೆ ತೊಂಡ್ ಮಟ್ಲ್ಯಾರ್ ದಿಸ್ ದೊಪಾರ್ಚೆ ಕಸೊ ದಿಸ್ತಾ ಬಗ್ ತಸೆ ಝಳ್‍ಝಳಿತ್ ದಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:16
26 ತಿಳಿವುಗಳ ಹೋಲಿಕೆ  

ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.


ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.


ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.


ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; ದೇವದೂತರುಗಳು ಆನಂದಘೋಷ ಮಾಡಿದರು!


ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು