Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:19 - ಪರಿಶುದ್ದ ಬೈಬಲ್‌

19 ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಮನುನ್ ಅತ್ತಾ ಬಗಟಲ್ಲೆ ಅನಿ ಅನಿಫಿಡೆ ಬಗ್ತಲೆ ಸಗ್ಳೆ ಲಿವ್ನ್ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:19
8 ತಿಳಿವುಗಳ ಹೋಲಿಕೆ  

ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.


ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.


ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು