ಪ್ರಕಟನೆ 1:2 - ಪರಿಶುದ್ದ ಬೈಬಲ್2 ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಜುವಾಂವಾಕ್ ಅಪ್ನಿ ಕಾಯ್-ಕಾಯ್ ಬಗಟ್ಲ್ಯಾನಾಯ್ ತೆ ಸಗ್ಳೆ ಸಾಂಗಟ್ಲ್ಯಾನಾಯ್. ಹಿ ಎಕ್ ದೆವಾಕ್ನಾ ಯೆಲ್ಲಿ ಖಬರ್ ಅನಿ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲಿ ಖರಿ ಸಂಗತ್. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.