Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:6 - ಪರಿಶುದ್ದ ಬೈಬಲ್‌

6 ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ ಅಮ್ಕಾ ಅಪ್ನಾಚ್ಯಾ ದೆವಾ ಅನಿ ಬಾಬಾಚಿ ಸೆವಾ ಕರ್‍ತಲ್ಯಾ ಯಾಜಕಾಂಚೊ ರಾಜ್ ಕರ್‍ಲ್ಯಾನಾಯ್, ಮಹಿಮಾ ಅನಿ ಸಗ್ಳ್ಯಾನ್ ಮೊಟೊ ಅದಿಕಾರ್ ಸದಾ ಸರ್ವತಾಕ್ ಜೆಜು ಕ್ರಿಸ್ತಾಚೊಚ್ ತಸೆಚ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:6
23 ತಿಳಿವುಗಳ ಹೋಲಿಕೆ  

ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಸರ್ವಾಧಿಪತ್ಯವು ಎಂದೆಂದಿಗೂ ಆತನದೇ. ಆಮೆನ್.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು