ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.
ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.
ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.
ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.
“ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.
ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.
ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು.