Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:5 - ಪರಿಶುದ್ದ ಬೈಬಲ್‌

5 ಅನಂತರ ಭೂಮಿಯ ಮೇಲೆ ಮತ್ತು ಸಮುದ್ರದ ಮೇಲೆ ನಿಂತಿದ್ದ ಒಬ್ಬ ದೇವದೂತನನ್ನು ಕಂಡೆನು. ಅವನು ತನ್ನ ಬಲಗೈಯನ್ನು ಪರಲೋಕದತ್ತ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಸಮುದ್ರದ ಮೇಲೂ ಭೂಮಿಯ ಮೇಲೂ ನಿಂತಿರುವ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತ್ಯಾ ಮಿಯಾ ಸಮುಂದರಾತ್ ಅನಿ ಜಿಮ್ನಿ ವರ್ತಿ ಇಬೆ ಹೊತ್ತೊ ಬಗಟಲ್ಲ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಉಜ್ವೊ ಹಾತ್ ಸರ್ಗಾಕ್ಡೆ ವೈರ್ ಉಕಲ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:5
29 ತಿಳಿವುಗಳ ಹೋಲಿಕೆ  

ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.


ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.


ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು,


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.


ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ನೀವು ದೇಶವನ್ನು ಸಮಾನವಾಗಿ ಪಾಲು ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನ್ನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನ್ನು ನಿಮಗೆ ಕೊಡುತ್ತಿದ್ದೇನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.


ನಾನು ನಿಮ್ಮನ್ನು ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಬರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು.


ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು