Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:10 - ಪರಿಶುದ್ದ ಬೈಬಲ್‌

10 ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜಿಮ್ನಿ ವೈಲಿ ಲೊಕಾ ಹ್ಯಾ ದೊಗ್ಯಾಂಚ್ಯಾ ಮರ್‍ನಾಕ್‍ ಲಾಗುನ್ ಲೈ ಖುಶಿ ಹೊತ್ಯಾತ್. ತೆನಿ ಗಮ್ಮತ್ ಕರ್‍ತ್ಯಾತ್, ಅನಿ ಎಕಾಮೆಕಾಕ್ನಿ ಆಯಾರ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್ ಹ್ಯಾ ದೊನ್ ಪ್ರವಾದ್ಯಾನಿ ಮಾನ್ಸಾಂಚ್ಯಾ ವರ್ತಿ ಲೈ ಮೊಟೊ ಕಸ್ಟ್ ಹಾನಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:10
29 ತಿಳಿವುಗಳ ಹೋಲಿಕೆ  

ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.


ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿರುವೆ.


ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.


ಆಗ ಅಹಾಬನು ಯೆಹೋಷಾಫಾಟನಿಗೆ, “ನೋಡಿದೆಯಾ! ನಾನು ನಿನಗೆ ಹೇಳಿದೆನಲ್ಲಾ! ಈ ಪ್ರವಾದಿಯು ಎಂದೂ ನನ್ನ ಬಗ್ಗೆ ಒಳ್ಳೆಯದೇನನ್ನೂ ಹೇಳುವುದಿಲ್ಲ. ನಾನು ಕೇಳಬಾರದ ಸಂಗತಿಗಳನ್ನು ಅವನು ಯಾವಾಗಲೂ ನನಗೆ ಹೇಳುತ್ತಾನೆ” ಎಂದು ಹೇಳಿದನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.


ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು