ಪ್ರಕಟನೆ 11:15 - ಪರಿಶುದ್ದ ಬೈಬಲ್15 ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಸತ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ಅನಿ “ಸರ್ಗಾತ್, ಜಗಾಚೊ ಅಧಿಕಾರ್ ಅಮ್ಚ್ಯಾ ಧನಿಯಾಕ್, ಅನಿ ತೆಚ್ಯಾ ಕ್ರಿಸ್ತಾಕ್ ದಿಲ್ಲೊ ಹಾಯ್, ತೊ ಸದಾ ಸರ್ವತಾಕ್ ಅದಿಕಾರ್ ಚಾಲ್ವುತಾ!” ಮನ್ತಲಿ ಮೊಟಿ-ಮೊಟಿ ಧನಾ ಆಯ್ಕೊ ಯೆಲಿ. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.