ಪ್ರಕಟನೆ 11:17 - ಪರಿಶುದ್ದ ಬೈಬಲ್17 ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಧನಿಯಾ ಸಗ್ಳ್ಯಾನಿಕಿ ಮೊಟ್ಯಾ ದೆವಾ ಅತ್ತಾ ಅಸಲ್ಲ್ಯಾ ಅನಿ ಫಾಟಿ ಹೊತ್ತ್ಯಾ! ತಿಯಾ ತುಜೊ ಮೊಟೊ ಅದಿಕಾರ್ ತುಜ್ಯಾ ತಾಬೆತ್ ಘೆಟ್ಲೆ ಅನಿ ಅಧಿಕಾರ್ ಚಾಲ್ವುಕ್ ಚಾಲು ಕರ್‍ಲೆ ಮನುನ್ ತುಕಾ ಧನ್ಯವಾದ್ ದಿತಾಂವ್! ಅಧ್ಯಾಯವನ್ನು ನೋಡಿ |
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.