ಪ್ರಕಟನೆ 11:18 - ಪರಿಶುದ್ದ ಬೈಬಲ್18 ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!. ಅಧ್ಯಾಯವನ್ನು ನೋಡಿ |
“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.