ಪ್ರಕಟನೆ 11:2 - ಪರಿಶುದ್ದ ಬೈಬಲ್2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಖರೆ ಭಾಯ್ಲ್ಯಾ ಬಾಜುಕ್ ಮೆಜುನಕೊ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಚಾಳಿಸಾರ್ ದೊನ್ ಮ್ಹಯಿನೆ ಪವಿತ್ರ್ ಶಾರ್ ಜುದೆವ್ ನ್ಹಯ್ ಹೊತ್ಯಾ ಲೊಕಾಚ್ಯಾ ಹಾತಾತ್ ದಿವ್ನ್ ಹೊಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
“ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.