ಪ್ರಕಟನೆ 11:3 - ಪರಿಶುದ್ದ ಬೈಬಲ್3 ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಗೊನಿ ಚಿಲಾಚೆ ಕಪ್ಡೆ ನೆಸಲ್ಲ್ಯಾ ದೊಗ್ಯಾ ಮಾಜ್ಯಾ ಸಾಕ್ಷಿಯಾಕ್ನಿ ಧಾಡುನ್ ದಿತಾ, ಅನಿ ತೆನಿ ತ್ಯಾ ಎಕ್ ಹಜಾರ್ ದೊನ್ಸೆ ಸಾಟ್ ದಿಸಾತ್ನಿ ದೆವಾಚಿ ಬಾತ್ಮಿ ಸಾಂಗ್ತ್ಯಾತ್”. ಮನುನ್ ಸಾಂಗುನ್ ಹೊಲೆ. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.