ಪ್ರಕಟನೆ 11:5 - ಪರಿಶುದ್ದ ಬೈಬಲ್5 ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕೊನ್‍ಬಿ ತೆಂಕಾ ಧಕ್ಕೊ ಕರುಕ್ ಬಗಟ್ಲ್ಯಾರ್, ತೆಂಚ್ಯಾ ತೊಂಡಾನಿತ್ನಾ ಆಗ್ ಭಾಯ್ರ್ ಯೆವ್ನ್ ತೆಂಚ್ಯಾ ದುಸ್ಮಾನಾಕ್ನಿ ನಾಸ್ ಕರುನ್ ಸೊಡ್ತಾ; ಅಸೆ ತೆಂಕಾ ಧಕ್ಕೊ ಕರುಕ್ ಬಗಟಲ್ಲ್ಯಾಕ್ನಿ ಜಿವಾನಿಚ್ ಮಾರುನ್ ಹೊತಾ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.