ಪ್ರಕಟನೆ 12:11 - ಪರಿಶುದ್ದ ಬೈಬಲ್11 ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಮ್ಚ್ಯಾ ಭಾವ್ ಅನಿ ಭೆನಿಯಾನಿ ಅಪ್ನಾಚಿ ಪರ್ವಾ ಕರಿನಸ್ತಾನಾ, ಬೊಕ್ಡಾಚ್ಯಾ ರಗ್ತಾಚ್ಯಾ ಅನಿ ತೆನಿ ಪರ್ಗಟ್ ಕರಲ್ಲ್ಯಾ ಖರ್‍ಯಾಚ್ಯಾ ಬಳಾನ್ ತೆಕಾ ಹಾರ್ವುನ್ ಜಿಕ್ಲ್ಯಾನಾತ್, ಅನಿ ತೆನಿ ತೆಂಚೊ ಜಿವ್ ಸೈತ್ ದಿವ್ಕ್ ತಯಾರ್ ಹೊತ್ತೆ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.