ಪ್ರಕಟನೆ 12:16 - ಪರಿಶುದ್ದ ಬೈಬಲ್16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಭೂವಿುಯು ಆ ಸ್ತ್ರೀಯ ಸಹಾಯಕ್ಕೆ ಬಂದು ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಜಿಮ್ನಿನ್ ಬಾಯ್ಕೊಮನ್ಸಿಕ್ ಮಜತ್ ಕರ್ಲಿನ್! ಅನಿ ತ್ಯಾ ಭಯಾನಕ್ ಸಾಪಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಪಾನಿಯಾಕ್ ಅಪ್ನಾಚೆ ತೊಂಡ್ ಉಗ್ಡುನ್ ಗಿಳ್ಳಿನ್ . ಅಧ್ಯಾಯವನ್ನು ನೋಡಿ |
ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.