Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:3 - ಪರಿಶುದ್ದ ಬೈಬಲ್‌

3 ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಎಕ್ ವಳಕ್ ಮಳ್ಬಾ ವರ್ತಿ ದಿಸ್ಲಿ ಥೈ ಎಕ್ ತಾಂಬ್ಡೊ ಭಯಾನಕ್ ಸಾಂಪ್ ಹೊತ್ತೊ, ತೆಕಾ ಸಾತ್ ಟಕ್ಲಿ ಹೊತ್ತಿ ಅನಿ ಧಾ ಸಿಂಗಾ ಹೊತ್ತಿ. ತೆಚ್ಯಾ ಹರಿಎಕ್ ಟಕ್ಲ್ಯಾ ವರ್ತಿ ಎಕೆಕ್ ಮುಕುಟ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:3
27 ತಿಳಿವುಗಳ ಹೋಲಿಕೆ  

“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.


ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.


ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.


ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.


ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.


ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ಆ ಪ್ರತಿಮೆಯ ಕಾಲ್ಬೆರಳುಗಳ ಒಂದಂಶ ಕಬ್ಬಿಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೆ ಆ ರಾಜ್ಯದ ಒಂದಂಶವು ಕಬ್ಬಿಣದಂತೆ ಗಟ್ಟಿ, ಇನ್ನೊಂದು ಅಂಶವು ಜೇಡಿಮಣ್ಣಿನಂತೆ ದುರ್ಬಲವಾಗಿರುತ್ತದೆ.


ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.


ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.


ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.


ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.


“ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು