Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:7 - ಪರಿಶುದ್ದ ಬೈಬಲ್‌

7 ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಸರ್ಗಾರ್ ಎಕ್ ಮೊಟಿ ಮಾರಾಮಾರಿ ಉಟ್ತಾ. ಮಿಂಗೆಲ್ ಅನಿ ತೆಚಿ ದುತಾ ಭಯಾನಕ್ ಸಾಪಾಚ್ಯಾ ವಾಂಗ್ಡಾ ಮಾರಾಮಾರಿ ಕರ್‍ತ್ಯಾತ್, ತೊ ಸಾಪ್ ಅಪ್ನಾಚ್ಯಾ ದುತಾಕ್ನಿ ಘೆವ್ನ್ ವಾಯ್ಟ್ ಮಾರಾಮಾರಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:7
23 ತಿಳಿವುಗಳ ಹೋಲಿಕೆ  

ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.


ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.


ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು