ಪ್ರಕಟನೆ 13:1 - ಪರಿಶುದ್ದ ಬೈಬಲ್1 ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಸಮುಂದರಾತ್ನಾ ಎಕ್ ಭಯಾನಕ್ ಜನಾವರ್ ಭಾಯ್ರ್ ಯೆತಲೆ ಮಿಯಾ ಬಗಟ್ಲೊ. ತೆಕಾ ಧಾ ಶಿಂಗಾ ಅನಿ ಸಾತ್ ಟಕ್ಲಿ ಹೊತ್ತಿ ; ತ್ಯೆಚ್ಯಾ ಹರಿಎಕ್ ಶಿಂಗಾ ವರ್ತಿ ಎಕೆಕ್ ಮುಕುಟ್ ಹೊತ್ತೆ, ಅನಿ ತ್ಯೆಚ್ಯಾ ಹರಿಎಕ್ ಟಕ್ಲ್ಯಾ ವರ್ತಿ ಎಕೆಕ್ ನಾವ್ ಹೊತ್ತೆ ತಿ ನಾವಾ ದೆವಾಕ್ ಅವ್ಮಾನ್ ಕರಿತ್. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.