12 ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
12 ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.
12 ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.
ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.
ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.
ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.
ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.