15 ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.
ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.
ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.
ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.
ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.
ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.
ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.
ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.
ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.
ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.